ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ನಿಧನ…

116
firstsuddi

ಚಂಡೀಗಢ : ಕೊರೊನಾ ಸೋಂಕಿನಿಂದ ಫ್ಲೈಯಿಂಗ್ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ (91) ಅವರು ನಿನ್ನೆ ತಡರಾತ್ರಿ ನಿಧನರಾಗಿದ್ದಾರೆ.

ಕಳೆದ ತಿಂಗಳು ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಿಲ್ಕಾ ಸಿಂಗ್ ಅವರು ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದರು. ಬಳಿಕ ಆಮ್ಲಜನಕದ ಮಟ್ಟ ಕಡಿಮೆಯಾಗಿದ್ದರಿಂದ ಜೂನ್ 3ರಂದು ಪಿಜಿಐಎಂಇಆರ್ ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಸುಮಾರು 11.30ಕ್ಕೆ ಕೊನೆಯುಸಿರೆಳದಿದ್ದಾರೆ.

ಮಿಲ್ಖಾ ಸಿಂಗ್ ಅವರ ಪತ್ನಿ ಹಾಗೂ ಭಾರತದ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲಾ ಕೌರ್ (85) ಕೋವಿಡ್ ಗೆ ಬಲಿಯಾಗಿದ್ದರು. ಪತ್ನಿ ಮೃತಪಟ್ಟ ಐದು ದಿನಗಳ ಅಂತರದಲ್ಲಿ ಮಿಲ್ಖಾಸಿಂಗ್ ಸಹ ಮೃತಪಟ್ಟಿದ್ದಾರೆ.

ಮಿಲ್ಖಾ ಸಿಂಗ್ ಅವರು 1958ರಲ್ಲಿ ಏಷ್ಯನ್ ಕ್ರೀಡಾಕೂಟದಲ್ಲಿ 200 ಮೀಟರ್ ಹಾಗೂ 400 ಮೀಟರ್ ಓಟದಲ್ಲಿ ಚಿನ್ನ, 1958ರ ಕಾಮನ್ ವೆಲ್ತ್ ನಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಇವರ ಸಾಧನೆಗೆ ಭಾರತ ಸರ್ಕಾರದಿಂದ ಪದ್ಮಶ್ರೀ ಗೌರವ ನೀಡಿದೆ.