ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಬೆಂಗಳೂರು ಸೇರಿ ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ.

33

ಬೆಂಗಳೂರು: ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಕರ್ನಾಟಕದ ಮೇಲೆ ಭಾರಿ ಪರಿಣಾಮ ಉಂಟುಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದಿಂದ ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು, ಒಡಿಶಾದಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದು ಮುಂದಿನ ಎರಡು ದಿನಗಳಲ್ಲಿ ಮತ್ತಷ್ಟು ಹೆಚ್ಚಗಿ ಹಲವು ಅವಾಂತರ ಸೃಷ್ಟಿಸುವ ಸಾಧ್ಯತೆ ಇದೆ.