ಬಂಡೆಮಠದ ಬಸವಲಿಂಗ ಶ್ರೀ ಆತ್ಮಹತ್ಯೆ ; ಆರೋಪಿಗಳಿಗೆ ನ.15ರ ವರೆಗೆ ನ್ಯಾಯಾಂಗ ಬಂಧನ…

80
firstsuddi

ರಾಮನಗರ : ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ನವೆಂಬರ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಂದು ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆ ಆರೋಪಿಗಳನ್ನು ಮಾಗಡಿ ಪೊಲೀಸರು ಇಂದು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ನ್ಯಾಯಾಧೀಶೆ ಎಂ. ಧನಲಕ್ಷ್ಮಿ ಮೂವರು ಆರೋಪಿಗಳಿಗೆ ನ.15ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ಪ್ರಕರಣದ ಎ1 ಆರೋಪಿ ಕಣ್ಣೂರು ಮಠದ ಡಾ. ಮೃತ್ಯುಂಜಯಶ್ರೀ, ಎ3 ಆರೋಪಿ ಮಹದೇವಯ್ಯನನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲಾಗಿದ್ದು, ಎ2 ಆರೋಪಿ ನೀಲಾಂಬಿಕೆಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಈ ಮೂವರು ಆರೋಪಿಗಳು ಶ್ರೀಗಳ ಸಾವಿಗೆ ಕಾರಣವಾಗಿದ್ದರು. ಅಲ್ಲದೇ ಕಣ್ಣೂರು ಶ್ರೀ ನಾನೇ ಹನಿಟ್ರ್ಯಾಪ್ ಮಾಡಿಸಿದ್ದು ಎಂದು ತಪ್ಪೊಪ್ಪಿಕೊಂಡಿದ್ದಾರೆ. ನೀಲಾಂಬಿಕೆಯನ್ನು ಮುಂದಿಟ್ಟುಕೊಂಡು ಹನಿಟ್ರ್ಯಾಪ್ ಮಾಡಲಾಗಿತ್ತು.