ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಸ್ವಯಂ ರಕ್ಷಣೆಗಾಗಿ ಬಂದೂಕು ಇಟ್ಟುಕೊಳ್ಳಲು ಮುಂಬೈ ಪೊಲೀಸರು ಪರವಾನಗಿ ನೀಡಿದ್ದಾರೆ.
ಎರಡು ತಿಂಗಳ ಹಿಂದೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನೀಡಿದ್ದ ಜೀವ ಬೆದರಿಕೆಯ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಬಂದೂಕು ಪರವಾನಗಿಗಾಗಿ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆ ಮುಂಬೈ ಪೊಲೀಸರು ಬಂದೂಕು ಪರವಾನಗಿಯನ್ನು ನೀಡಿದ್ದಾರೆ.
ಜೀವ ಬೆದರಿಕೆ ಹಿನ್ನೆಲೆ ಸಲ್ಮಾನ್ ಖಾನ್ ಇತ್ತೀಚೆಗೆ ಬಹಳಷ್ಟು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಬುಲೆಟ್ ಪ್ರೂಫ್ ಕಾರನ್ನೂ ಕೂಡ ಖರೀದಿಸಿದ್ದರು. ಚಿತ್ರೀಕರಣಕ್ಕೆ ತೆರಳುವುದಾದರೂ ಬುಲೆಟ್ ಪ್ರೂಫ್ ಕಾರಲ್ಲೇ ಹೋಗುತ್ತಿದ್ದಾರೆ ಎನ್ನಲಾಗಿದೆ.










