ಹುಬ್ಬಳ್ಳಿ : ಡಿಸೆಂಬರ್ 31ರಂದು ಬಂದ್ಗೆ ಕರೆ ನೀಡದಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕನ್ನಡ ಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.
ನಗರದಲ್ಲಿಂದು ಕಾರ್ಯಕಾರಣಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಂದ್ ಮಾಡುವುದು ಎಲ್ಲದಕ್ಕೂ ಉತ್ತರವಲ್ಲ. ಎಂಇಎಸ್ ಬ್ಯಾನ್ ಬಗ್ಗೆ ತನಿಖೆ ನಡೆಯುತ್ತಿದೆ. ಅಲ್ಲದೇ, ಇದರ ಬಗ್ಗೆ ಅಧಿವೇಶನದಲ್ಲಿಯೂ ಕೂಡ ಚರ್ಚೆ ಮಾಡಿದ್ದೇನೆ. ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಬಂದ್ಗೆ ಕರೆ ಕೊಡುವುದು ಬೇಡ ಎಂದು ಮಾಧ್ಯಮದ ಮೂಲಕ ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡಿದ್ದಾರೆ.










