ಬಂಧನ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ಮನೀಶ್ ಸಿಸೋಡಿಯಾ ; ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ…

61
firstsuddi

ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ.

ಸಿಸೋಡಿಯಾ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಸಿಜೆಐ ಡಿ.ವೈ ಚಂದ್ರಚೂಡ್ ಪೀಠದ ಮುಂದೆ ಪ್ರಕರಣದ ತುರ್ತು ವಿಚಾರಣೆ ನಡೆಸಲು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿ ಪೀಠ ವಿಚಾರಣೆ ಅರ್ಜಿಗಳು ಪಟ್ಟಿಯಾಗಿರುವ ಹಿನ್ನೆಲೆ ಕಲಾಪದ ಅಂತ್ಯದಲ್ಲಿ ವಿಚಾರಣೆ ನಡೆಸುವ ಭರವಸೆ ನೀಡಿತು.

ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮನೀಶ್ ಸಿಸೋಡಿಯಾ ಅವರನ್ನು 8 ಗಂಟೆಗಳ ಸುದೀರ್ಘ ವಿಚಾರಣೆ ಬಳಿಕ ಭಾನುವಾರ ಬಂಧಿಸಿತ್ತು. ನಿನ್ನೆ ಅವರನ್ನು ಸಿಬಿಐ ವಿಶೇಷ ನ್ಯಾಯಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಕೋರ್ಟ್ ಸಿಸೋಡಿಯಾ ಅವರನ್ನು ಐದು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.