ಬಜೆಟ್ ಪ್ರತಿಯನ್ನು ಕೆಂಪು ಬಟ್ಟೆಯಿಂದ ಸುತ್ತಿಕೊಂಡು ಸಂಸತ್ ಪ್ರವೇಶಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

262
firstsuddi

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತದಿಂದ 2ನೇ ಬಾರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕರಿಸಿದ್ದು, ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಮೊದಲ ಬಜೆಟ್ ಬೆಳಿಗ್ಗೆ 11 ಗಂಟೆಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಲಿದ್ದಾರೆ. ಈ ಹಿಂದೆ ಹಣಕಾಸು ಸಚಿವರು ಬಜೆಟ್ ಪ್ರತಿಯನ್ನು ಬ್ರೀಫ್‍ಕೇಸ್‍ನಲ್ಲಿ ಬಜೆಟ್ ಪ್ರತಿಯನ್ನು ತರುತ್ತಿದ್ದರು. ಆದರೆ ಈ ಬಾರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ರೀಫ್‍ಕೇಸ್ ಬದಲು ಬಜೆಟ್ ಪ್ರತಿಯನ್ನು ಕೆಂಪು ಬಟ್ಟೆಯಿಂದ ಸುತ್ತಿಕೊಂಡು ಸಂಸತ್ ಪ್ರವೇಶಿಸಿದ್ದಾರೆ.