ಬಜೆಪಿ ಮುಖಂಡ ರಾಜೇಶ್ ಬನ್ನೂರು ಮನೆ ನೆಲಸಮ; ಆರೋಪಿಗಳನ್ನು ಬಂಧಿಸುವಂತೆ ಬಜೆಪಿ ಕಾರ್ಯಕರ್ತರ ಆಗ್ರಹ.

38

ಮಂಗಳೂರು: ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಸಂಬಂಧಿಸಿದಂತೆ ದೇವಸ್ಥಾನ ಸುತ್ತಮುತ್ತಲಿನ ಮನೆಗಳ ತರೆವು ಕಾರ್ಯಾಚರಣೆ ನಡೆಯುತ್ತಿದೆ. ಅದರಂತೆ ನಿನ್ನೆ ತಡರಾತ್ರಿ ಬಿಜೆಪಿ ಮುಖಂಡ ರಾಜೇಶ್ ಬನ್ನೂರು ಅವರ ಮನೆಯನ್ನು ನೆಲಸಮ ಮಾಡಲಾಗಿದೆ. ನೆಲಸಮ ಮಾಡುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೆಲಸಮ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಬಜೆಪಿ ಕಾರ್ಯಕರ್ತರು ಪೊಲೀಸರಿಗೆ ಆಗ್ರಹಿಸಿದ್ದಾರೆ. ಮನೆ ಧ್ವಂಸಗೊಂಡ ನಂತರ ಶ್ರೀ ಮಹಾಲಿಂಗೇಶ್ವರ ದೇವಾಲಯ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಮುಸುಕ ಧಾರಿಗಳು ಓಮ್ನಿ ಕಾರಿನಲ್ಲಿ ಬಂದು ನೆಲಸಮ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಮನೆಯಲ್ಲಿದ್ದ ನಾಯಿ ಮರಿ ಮಣ್ಣಿನಡಿ ಸಿಲುಕಿ ಸಾವನಪ್ಪಿದ್ದು, ಅಲ್ಲದೆ 32 ಗ್ರಾಂ ಚಿನ್ನ, ದಾಖಲೆ ಪತ್ರ, ಹಣಗಳನ್ನೆಲ್ಲ ಮುಸುಧಾರಿಗಳು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಈ ವೇಳೆ ಪೆÇಲೀಸರು ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಕೂಡ ನಡೆದಿತ್ತು. ನಂತರ ಪೆÇಲೀಸ್ ಠಾಣೆಗೆ ಆಗಮಿಸಿದ ಮಾಜಿ ಸಂಸದ ನಳೀನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಪುತ್ತೂರು ಆಗಮಿಸಿ ಯಾವುದೇ ಸೂಚನೆ ನೀಡದೇ ರಾಜೇಶ್ ಬನ್ನೂರು ಅವರ ಮನೆ ಧ್ವಂಸಗೊಳಿಸಿದವರ ಮೇಲೆ ಕೇಸ್ ಹಾಕುವಂತೆ ಒತ್ತಾಯಿಸಿದರು. ಕೊನೇ ಕ್ಷಣದಲ್ಲಿ ಪುತ್ತೂರು ನಗರಠಾಣಾ ಪೊಲೀಸರು ಪುತ್ತೂರು ಮಹಾಲಿಂಗೇಶ್ವರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ, ಟ್ರಸ್ಟಿ ವಿನಯ ಸುವರ್ಣ ಮತ್ತು ಇತರರ ಮೇಲೆ ಕೇಸ್ ದಾಖಲಿಸಿದ್ದಾರೆ.