ಚಿತ್ರದುರ್ಗ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಲಗಿರಿಯಪ್ಪ(35) ಬಂಧಿತ ಆರೋಪಿ. ಕಳೆದ ತಿಂಗಳು ನವೆಂಬರ್19 ರಂದು ಬಟ್ಟೆ ತೊಳೆಯಲು ಹೊರಟಿದ್ದ ಬಾಲಕಿಯನ್ನು ಪುಸಲಾಯಿಸಿ ವಿವೇಕಾನಂದ ನಗರದ ಗುಡ್ಡಕ್ಕೆ ಎಳೆದೊಯ್ದು ಆಕೆಯ ಕೈ-ಕಾಲುಗಳನ್ನು ಹಗ್ಗದಿಂದ ಕಟ್ಟಿ ಹಾಕಿ ಅತ್ಯಾಚಾರ ಎಸಗಿದ್ದ. ಅಲ್ಲದೆ ಯಾರಿಗಾದರು ಈ ವಿಚಾರ ತಿಳಿಸಿದರೆ ಕೊಲೆ ಮಾಡುವುದಾಗಿ ಬಾಲಕಿಗೆ ಬೆದರಿಕೆ ಕೂಡ ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಸಂಬಂಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಫೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.










