ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಮಿತಿ ಹೆಚ್ಚಿಸಿದ ಸುಪ್ರೀಂ.

71
firstsuddi

ಬೆಂಗಳೂರು : ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳಲ್ಲಿ ಕಬ್ಬಿಣ ಅದಿರು ಗಣಿಗಾರಿಕೆಯ ಮಿತಿ ಸುಪ್ರೀಂ ಕೋರ್ಟ್ ಹೆಚ್ಚಿಸಿದ್ದು, ಗಣಿಗಾರಿಕೆ ಮತ್ತು ಪರಿಸರ ಸಂರಕ್ಷಣೆ ಎರಡೂ ಜೊತೆಯಾಗಿಯೇ ನಡೆಯಬೇಕೆಂದು ಸೂಚಿಸಿದೆ.

ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿನ ಗಣಿಗಳ ಮಿತಿಯನ್ನು ಈಗ ಏಳು ಮಿಲಿಯನ್ ಮೆಟ್ರಿಕ್ ಟನ್ ಗಳಿಂದ 15 ಮಿಲಿಯನ್ ಮೆಟ್ರಿಕ್ ಟನ್ ಗಳಿಗೆ ಏರಿಸಲಾಗಿದೆ. ಬಳ್ಳಾರಿ ಗಣಿಗಳಲ್ಲಿ ಅನುಮತಿಸಲಾದ 28 ಮಿಲಿಯನ್ ಮೆಟ್ರಿಕ್ ಟನ್ ಗಳ ಮಿತಿಯನ್ನು ಈಗ 35 ಮಿಲಿಯನ್ ಮೆಟ್ರಿಕ್ ಟನ್ ಗಳಿಗೆ ಹೆಚ್ಚಿಸಲಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಪರಿಸರ ನಾಶದ ಕಾರಣದಿಂದ 2011ರಲ್ಲಿ ಸುಪ್ರೀಂ ಕೋರ್ಟ್ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಗಣಿಗಾರಿಕೆಗೆ ನಿಷೇಧ ವಿಧಿಸಿತ್ತು. ಇದಲ್ಲದೆ, ಗಣಿಗಳ ರಫ್ತಿನ ಮೇಲೆ ಕೂಡ ನಿಷೇಧ ಹೇರಲಾಗಿತ್ತು. ಈ ವರ್ಷದ ಮೇ ತಿಂಗಳಿನಲ್ಲಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಕಬ್ಬಿಣದ ಅದಿರು ರಫ್ತು ಮೇಲಿನ ನಿಷೇಧವನ್ನು ಸುಪ್ರೀಂ ಕೋರ್ಟ್ ತೆಗೆದುಹಾಕಿತ್ತು.