ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಆಗಿ 23 ವರ್ಷದ ಯುವತಿ ಆಯ್ಕೆ…

60
firstsuddi

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ 23 ವರ್ಷದ ಡಿ. ತ್ರಿವೇಣಿ ಆಯ್ಕೆ ಆಗಿದ್ದು, ರಾಜ್ಯದಲ್ಲೇ ಅತಿ ಕಿರಿಯ ವಯಸ್ಸಿನ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಉಪ ಮೇಯರ್ ಆಗಿ ಬಿ.ಜಾನಕಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆಗೆ ಇಂದು ಚುನಾವಣೆ ನಡೆಯಿತು. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಒಟ್ಟು 44 ಸದಸ್ಯರಿದ್ದು, ಬಹುಮತ ಪಡೆಯಲು 23 ಮತಗಳನ್ನು ಪಡೆಯುವುದು ಅನಿವಾರ್ಯ ಆಗಿತ್ತು. ಆದರೆ, ಕಾಂಗ್ರೆಸ್ ನ 28 ಸದಸ್ಯರಿದ್ದು, ಎಲ್ಲರ ಮತಗಳು ಡಿ. ತ್ರಿವೇಣಿ ಅವರಿಗೆ ಬಿದ್ದಿವೆ. ಇನ್ನು ಬಿಜೆಪಿಯಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಗೆ ಕೇವಲ 16 ಮತಗಳು ಬಿದ್ದಿವೆ. ಈ ಮೂಲಕ ಹೆಚ್ಚು ಮತಗಳನ್ನು ಪಡೆದ ತ್ರಿವೇಣಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.