ಬಸ್-ಆಟೋ ನಡುವೆ ಮುಖಾಮುಖಿ ಡಿಕ್ಕಿ : 13 ಮಂದಿ ದುರ್ಮರಣ…

83
firstsuddi

ಗ್ವಾಲಿಯರ್(ಮಧ್ಯ ಪ್ರದೇಶ) : ಬೆಳ್ಳಂಬೆಳಗ್ಗೆ ಬಸ್-ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದಿದೆ.

ಘಟನೆಯಲ್ಲಿ 12 ಮಂದಿ ಮಹಿಳೆಯರು ಮತ್ತು ಓರ್ವ ಪುರುಷ ಸೇರಿದಂತೆ 13 ಮಂದಿ ಮೃತಪಟ್ಟರೆ, ಇನ್ನೂ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ದುರಂತಕ್ಕೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಘೋಷಣೆ ಮಾಡಿದ್ದಾರೆ.