ಬ್ರಹ್ಮಾವರ: ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಭೀಕರ ಅಫಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ಧರ್ಮಾವರ ಅಡಿಟೋರಿಯಂ ಬಳಿ ಸಂಭವಿಸಿದೆ.
ಮೃತ ಯುವಕನನ್ನು ಬೈಕ್ ಸವಾರ ಉಪ್ಪಿನಕೋಟೆ ನಿವಾಸಿ ಪ್ರೀತಮ್ ಡಿಸಿಲ್ವಾ (30) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ, ಖಾಸಗಿ ಎಕ್ಸ್ ಪ್ರೆಸ್ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸವಾರ ಪ್ರೀತಮ್ ಡಿಸಿಲ್ವಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಈ ಸಂಬಂಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










