ಬಸ್, ಬೈಕ್ ನಡುವೆ ಭೀಕರ ರಸ್ತೆ ಅಪಘಾತ – ಒಂದೇ ಕುಟುಂಬದ ನಾಲ್ವರು ದುರ್ಮರಣ…

102
firstsuddi

ಚಿತ್ರದುರ್ಗ : ಬೈಕ್ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮಣಕ್ಕೀಡಾದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ದುಮ್ಮಿ ಗ್ರಾಮದ ಬಳಿ ನಡೆದಿದೆ. ನಾಗರಾಜ್(43), ಶೈಲಜ (40), ವೀರೇಶ್ (15), ಸಂತೋಷ (13), ಮೃತ ದುರ್ದೈವಿಗಳು.

ಮೃತರೆಲ್ಲರೂ ಬರಮಣ್ಣನಕಾಯಕ ದುರ್ಗಾ ನಿವಾಸಿಗಳಾಗಿದ್ದು, ಚನ್ನಗಿರಿ ತಾಲ್ಲೂಕಿನ ಹೆಬ್ಬಳಗೆರೆ ಗ್ರಾಮದ ಬಂಧುಗಳ ಮನೆಯಲ್ಲಿ ಊಟ ಮುಗಿಸಿ ತಡರಾತ್ರಿ ವಾಪಸ್ ಬರುತ್ತಿದ್ದರು. ಈ ವೇಳೆ ಚಿತ್ರದುರ್ಗದಿಂದ ಬರುತ್ತಿದ್ದ ಖಾಸಗಿ ಬಸ್ ವೊಂದು ಎದುರು ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷಯ  ತಿಳಿದು ಸ್ಥಳಕ್ಕಾಗಮಿಸಿದ ಹೊಳಲ್ಕೆರೆ ಪೋಲಿಸರು ಪರಿಶೀಲನೆ ನಡೆಸಿದ್ದಾರೆ. ಹೊಳಲ್ಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.