ಮುಂಬೈ : ಬಸ್ ಹಾಗೂ ಕಂಟೇನರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 15 ಮಂದಿ ಸ್ಥಳದಲ್ಲೇ ಮೃತಪಟ್ಟು 35 ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 10:30 ಕ್ಕೆ ಬಸ್ ಔರಂಗಬಾದ್ ಕಡೆಗೆ ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 15 ಮಂದಿ ಮೃತಪಟ್ಟಿದ್ದು, 35ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.










