ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ…

152
firstsuddi

ಕಲಬುರಗಿ : ಬಹಿರ್ದೆಸೆಗೆ ತೆರಳಿದ್ದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯ ಆಳಂದ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಶಾಲೆಗೆ ತೆರಳಲು ಆಳಂದದ ತಾಲೂಕಿನ ಗ್ರಾಮವೊಂದರಲ್ಲಿನ ತನ್ನ ಸಂಬಂಧಿಕರ ಮನೆಯಲ್ಲಿದ್ದಳು. ನಿನ್ನೆ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಹಿರ್ದೆಸೆಗೆಂದು ಮನೆಯಿಂದ ಹೊರಹೋಗಿದ್ದ ಬಾಲಕಿ ಸುಮಾರು ಹೊತ್ತು ಕಳೆದರೂ ಮನೆಗೆ ಬಂದಿರಲಿಲ್ಲ. ಗಾಬರಿಗೊಂಡ ಕುಟುಂಬಸ್ಥರು, ಗ್ರಾಮಸ್ಥರು ಹುಡುಕಾಟ ನಡೆಸಿದಾಗ ಗ್ರಾಮದ ಹೊರವಲಯದ ಕಬ್ಬಿನಗದ್ದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಬಾಲಕಿಯ ಮೈಮೇಲೆ ಎಳದಾಡಿ ತರಚಿದ ಗಾಯಗಳಾಗಿದ್ದು, ವೇಲ್ ನಿಂದ ಕುತ್ತಿಗೆಗೆ ಬಿಗಿದು ಕೊಲೆ ಮಾಡಲಾಗಿದೆ. ಅತ್ಯಾಚಾರವೆಸಗಿ ಬಾಲಕಿ ಕೊಂದಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.