ಬಹುಕೋಟಿ ಮೇವು ಹಗರಣ ಪ್ರಕರಣ – ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು…

73
firstsuddi

ರಾಂಚಿ : ಡೊರಾಂಡಾ ಖಜಾನೆ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದ ಮಾಜಿ ಮುಖ್ಯಮಂತ್ರಿ ಮತ್ತು ರಾಷ್ಟ್ರೀಯ ಜನತಾ ದಳ (ಆರ್ ಜೆಡಿ) ನಾಯಕ ಲಾಲು ಪ್ರಸಾದ್ ಯಾದವ್ ಅವರನ್ನು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದೆ.

ಮೇವು ಹಗರಣದ ಪ್ರಕರಣದ 5ನೇ ಕೇಸ್ ಇದಾಗಿದ್ದು, ಕಳೆದ ವರ್ಷದ ಏಪ್ರಿಲ್ ನಲ್ಲಿ ದುಮ್ಕಾ ಖಜಾನೆ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಲಾಲೂಗೆ ಜಾಮೀನು ನೀಡಿತ್ತು. ಅಕ್ಟೋಬರ್ 2020ರಲ್ಲಿ ಚೈಬಾಸಾ ಖಜಾನೆ ಹಗರಣ ಪ್ರಕರಣದಲ್ಲಿ ಮತ್ತು ಫೆಬ್ರವರಿ 2020ರಲ್ಲಿ ದಿಯೋಘರ್ ಖಜಾನೆ ಹಗರಣ ಪ್ರಕರಣದಲ್ಲಿ ಇವರು ಜಾಮೀನು ಪಡೆದಿದ್ದರು. ಈಗ ಡೊರಾಂಡಾ ಖಜಾನೆ ಹಗರಣ ಪ್ರಕರಣದಲ್ಲಿ ದೋಷಿಯೆಂದು ತೀರ್ಪು ನೀಡಲಾಗಿದ್ದು, ಪ್ರಮುಖ ಆರೋಪಿ ಲಾಲೂ ಪ್ರಸಾದ್ ಯಾದವ್ ಶಿಕ್ಷೆಯನ್ನು ಫೆಬ್ರವರಿ 21 ರಂದು ಪ್ರಕಟಿಸಲಾಗುವುದು ಎಂದು ಕೋರ್ಟ್ ಹೇಳಿದೆ.

ಜಾರ್ಖಂಡ್ ನ ಐದು ಮೇವು ಹಗರಣ ಪ್ರಕರಣಗಳಲ್ಲಿ ಸುಮಾರು ಕೋಟ್ಯಂತರ ರೂಪಾಯಿಯನ್ನು ಖಜಾನೆಗಳಿಂದ ಅಕ್ರಮವಾಗಿ ತೆಗೆದುಕೊಳ್ಳಲಾಗಿದೆ ಎಂಬ ಗಂಭೀರ ಆರೋಪ ಲಾಲು ಯಾದವ್ ಮೇಲಿದೆ.