ಕೋಲ್ಕತ್ತಾ : ಬಹುಮಹಡಿ ಕಟ್ಟಡದ 13ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿರುವ ಘಟನೆ ಕೋಲ್ಕತ್ತಾದ ಸ್ಟ್ಯಾಂಡ್ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಿಆರ್ ಪಿ ಫ್ ಸಿಬ್ಬಂದಿ ಹಾಗೂ ಒಬ್ಬರು ಪೊಲೀಸ್ ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ, ಎಂದು ಪಶ್ಚಿಮ ಬಂಗಾಳ ಸರ್ಕಾರದ ಎಂಐಸಿ ಅಗ್ನಿಶಾಮಕ ಸೇವೆಗಳ ಸಚಿವ ಸುಜಿತ್ ಬೋಸ್ ತಿಳಿಸಿದ್ದಾರೆ.
ಘಟನೆ ಹಿನ್ನೆಲೆ ಸಂತಾಪ ಸೂಚಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೃತ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಮತ್ತು ಕುಟುಂಬದ ಓರ್ವ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಹೇಳಿದ್ದಾರೆ.










