ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ – 14 ಮಂದಿ ಸಜೀವ ದಹನ…

52
firstsuddi

ರಾಂಚಿ : ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್ ನ ಧನ್‍ಬಾದ್‍ನಲ್ಲಿ ನಡೆದಿದೆ.

ಘಟನೆ ವೇಳೆ 10 ಮಹಿಳೆಯರು ಹಾಗೂ ಮೂವರು ಮಕ್ಕಳು ಸೇರಿದಂತೆ 14 ಮಂದಿ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಅವರನ್ನೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ, ಆದರೆ ಅನೇಕರು ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

ಘಟನೆಗೆ ಸಂಬಂಧಿಸಿದಂತೆ ನರೇಂದ್ರ ಮೋದಿ ಹಾಗೂ ಜಾರ್ಖಂಡ್ ನ ಮುಖ್ಯಮಂತ್ರಿ ಹೇಮಂತ್ ಸೋರೆನ್ ಟ್ವೀಟ್ ಮಾಡಿ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಧನ್‍ಬಾದ್‍ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ಸಾವನ್ನಪ್ಪಿರುವ ವಿಷಯ ಕೇಳಿ ತೀವ್ರ ದುಃಖವಾಗಿದೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು. ಹಾಗೂ ಮೃತರ ಕುಟುಂಬಸ್ಥರಿಗೆ 2 ಲಕ್ಷ ರೂ. ಹಾಗೂ ಗಾಯಳುಗಳಿಗೆ 50,000ರೂ. ಪರಿಹಾರವನ್ನು ಘೋಷಿಸಿದ್ದಾರೆ.