ಬೆಂಗಳೂರು : ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ಯಾರೂ ಆತಂಕಪಡುವ ಅಗತ್ಯವಿಲ್ಲ. ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಎಲ್ಲಾ ರೀತಿಯ ತನಿಖೆ ನಡೆಯುತ್ತಿದೆ. ಎಲ್ಲಿಂದ ಕರೆ ಬಂದಿದೆ ಎನ್ನುವುದರ ಬಗ್ಗೆ ತನಿಖೆಯಾಗುತ್ತಿದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಕೆಟ್ಟ ಹೆಸರು ತರಬೇಕು ಎಂದು ಹೇಳಿ ಈ ರೀತಿ ಮಾಡುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಇದನ್ನು ಗಂಭೀರವಾಗಿ ತಗೆದುಕೊಂಡು ತಪಾಸಣೆ ಮಾಡುತ್ತಿದ್ದಾರೆ. ಎಂದರು.
ಕರ್ನಾಟಕದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ. ಬೆದರಿಕೆ ಕರೆ ಮಾಡಿದವರನ್ನು ಬಂಧನ ಮಾಡುತ್ತೇವೆ. ಕಾಲ್ ಡಿಟೈಲ್ಸ್ ಚೆಕ್ ಮಾಡಲು ಹೇಳಿದ್ದೇವೆ. ಎಲ್ಲಾ ರೀತಿ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ತಗೆದುಕೊಳ್ಳುತ್ತಾರೆ ಎಂದು ಮಾಹಿತಿ ನೀಡಿದರು.










