ಬಾಡಿಗೆ ತಾಯ್ತನದ ಮೂಲಕ ಅವಳಿ ಮಕ್ಕಳಿಗೆ ತಂದೆ-ತಾಯಿಯಾದ ನಯನತಾರ-ವಿಘ್ನೇಶ್

68
firstsuddi

ತಮಿಳಿನ ಖ್ಯಾತ ನಿರ್ದೇಶಕ ವಿಘ್ನೇಶ್ ಶಿವನ್ ಹಾಗೂ ಖ್ಯಾತ ನಟಿ ನಯನತಾರಾ ಕಳೆದ ಜೂನ್ ತಿಂಗಳಲ್ಲಿ ಮದುವೆಯಾಗಿದ್ದರು. ಇದೀಗ ನಾಲ್ಕು ತಿಂಗಳಿಗೆ ಮುದ್ದಾದ ಅವಳಿ ಮಕ್ಕಳಿಗೆ ಪೋಷಕರಾಗಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ.

ವಿಘ್ನೇಶ್ ಶಿವನ್ ಸಾಮಾಜಿಕ ಜಾಲತಾಣದಲ್ಲಿ ಅವಳಿ ಮಕ್ಕಳ ಕಾಲಿಗೆ ಮುತ್ತಿಕ್ಕುತ್ತಿರುವ ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ನಯನ ಹಾಗೂ ನಾನು ಅಮ್ಮ ಅಪ್ಪ ಆಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಮಾರ್ಚ್ ನಲ್ಲಿ ಈ ಜೋಡಿ ಇನ್ನೂ ಮದುವೆ ಆಗದೇ ಇದ್ದರೂ, ಬಾಡಿಗೆ ತಾಯಿ ಮೂಲಕ ಮಗುವನ್ನು ಪಡೆದುಕೊಳ್ಳುವ ಪ್ಲ್ಯಾನ್ ಮಾಡಲಿದ್ದಾರೆ ಎಂಬ ಸುದ್ದಿ ತಮಿಳು ಸಿನಿಮಾ ರಂಗದಲ್ಲಿ ಜೋರಾಗಿಯೇ ಸುದ್ದಿ ಆಯಿತು. ಮದುವೆಗೂ ಮುನ್ನ ಬಾಡಿಗೆ ತಾಯಿಯನ್ನು ಫಿಕ್ಸ್ ಮಾಡಿಯೇ ಇವರು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವಳಿ ಮಕ್ಕಳ ಪೋಷಕರಾಗುವ ಮೂಲಕ ಅದನ್ನೂ ನಿಜ ಮಾಡಿದ್ದಾರೆ.