ಬಾಲಕನಿಗೆ ತಮ್ಮ ನಾಲಿಗೆ ನೆಕ್ಕುವಂತೆ ಹೇಳಿದ ದಲೈ ಲಾಮಾ : ಭಾರೀ ಆಕ್ರೋಶ…

45
firstsuddi

ನವದೆಹಲಿ : ಟಿಬೆಟಿಯನ್ ಧರ್ಮಗುರು ದಲೈ ಲಾಮಾ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಅಪ್ರಾಪ್ತ ಬಾಲಕೊಬ್ಬನ ಬಾಯಿಗೆ ಮುತ್ತಿಟ್ಟು ತನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿದ ವಿಡಿಯೋವೊಂದು ವೈರಲ್ ಆಗಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.

ವಿಡಿಯೋದಲ್ಲಿ ಬೌದ್ಧರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಾಲಕನೊಬ್ಬ ದಲೈ ಲಾಮಾ ಅವರಿಗೆ ಗೌರವ ಸಲ್ಲಿಸಲು ತಲೆ ಬಾಗಿದ್ದಾನೆ. ಈ ವೇಳೆ ದಲೈ ಲಾಮಾ ಅವನ ತುಟಿಗಳನ್ನು ಚುಂಬಿಸಿದರು. ನಂತರ ಅವರ ನಾಲಿಗೆಯನ್ನು ಹೊರತೆಗೆದು ನನ್ನ ನಾಲಿಗೆಯನ್ನು ನೆಕ್ಕುವಂತೆ ಹೇಳಿರುವುದು ಕಂಡುಬಂದಿದೆ.

ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಲ್ಲೆಡೆ ಬೌದ್ಧ ಧರ್ಮ ಗುರುವಿನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಅಪ್ರಾಪ್ತ ಬಾಲಕನೊಂದಿಗೆ ದಲೈ ಲಾಮಾ ವರ್ತಿಸಿರುವ ರೀತಿಯನ್ನು ನೆಟ್ಟಿಗರು ಅಸಹ್ಯಕರ ಎಂದು ಕರೆದಿದ್ದಾರೆ.