ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪೊರಕೆ ಹಿಡಿದು ಶೌಚಾಲಯ ಸ್ವಚ್ಛಗೊಳಿಸುವ ಮೂಲಕ ಇಂದು ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಗಾಂಧಿ ಜಯಂತಿಯ ಅಂಗವಾಗಿ ಇಂದು ಶಾಸಕ ಸಿ.ಟಿ.ರವಿಯವರು ರಾಮನಹಳ್ಳಿ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಶೌಚಾಲಯ ಸ್ವಚ್ಛಗೊಳಿಸಿ, ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.










