ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಕೊಲೆ: ಮೂವರ ಬಂಧನ.

56

ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಅಯೋಧ್ಯೆಯಲ್ಲಿ ನಡೆದಿದೆ. ಮರಣೋತ್ತರ ಪರೀಕ್ಷೆ ವೇಳೆ ಬಾಲಕಿಯ ಸ್ಥಿತಿ ನೋಡಿ ವೈದ್ಯರು ಕಣ್ಣೀರಿಟಿದ್ದಾರೆ. ಅಯೋಧ್ಯೆಯಲ್ಲಿ ನಡೆದ ಬಾಲಕಿ ಮೇಲಿನ ಗ್ಯಾಂಗ್ ರೇಪ್ ಕೇಸಲ್ಲಿ ಪೊಲೀಸರು ಮೂವರು ಕಾಮುಕರನ್ನು ಸೋಮವಾರ ಬಂಧಿಸಿದ್ದಾರೆ. ಅತ್ಯಾಚಾರಿಗಳಾದ ಹರಿರಾಮ್ ಕೋರಿ, ದಿಗ್ವಿಜಯ್ ಸಿಂಗ್ ಅಲಿಯಾಸ್ ಬಾಬಾ ಮತ್ತು ವಿಜಯ್ ಸಾಹು ಪೊಲೀಸರ ಮುಂದೆ ತಮ್ಮ ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ. ಸಾಮಾನ್ಯವಾಗಿ ವೈದ್ಯರು ನಿತ್ಯ ನೂರಾರು ಸಾವುಗಳನ್ನು ನೋಡುತ್ತಾರೆ, ಎಷ್ಟೋ ಮಂದಿಯ ಮರಣೋತ್ತರ ಪರೀಕ್ಷೆಯನ್ನು ನಡೆಸುತ್ತಾರೆ. ಮನಸ್ಸು ಗಟ್ಟಿ ಮಾಡಿಕೊಳ್ಳದಿದ್ದರೆ ಅವರು ಆ ವೃತ್ತಿಯಲ್ಲಿ ಮುಂದುವರೆಯಲು ಸಾಧ್ಯವಿಲ್ಲ, ಆದರೆ ಬಾಲಕಿ ಮರಣೋತ್ತರ ಪರೀಕ್ಷೆ ನಡೆಸುವಾಗ ಅವರು ಕಣ್ಣೀರು ಹಾಕಿದ್ದಾರೆ.