ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಕೇಸ್ ದಾಖಲು…

92
firstsuddi

ಮಂಡ್ಯ : ಬಾಲಕಿ ಮೇಲೆ ಸಂಬಂಧಿಕನೋರ್ವ ಅತ್ಯಾಚಾರಕ್ಕೆ ಯತ್ನಿಸಿರುವ ಆರೋಪದ ಮೇಲೆ ಆತನನ್ನು ಬಂಧಿಸಿರುವ ಘಟನೆ ನಗರದ ಬಿಡಿ ಕಾಲೋನಿಯಲ್ಲಿ ನಡೆದಿದೆ.

ಶಾಲೆಯಿಂದ ಬಾಲಕಿಯನ್ನು ಕರೆತಂದಿರುವ ಆರೋಪಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಸಹಕರಿಸದ ಹಿನ್ನೆಲೆಯಲ್ಲಿ ಆಕೆಯ ಮೇಲೆ ಹಲ್ಲೆ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಮುಂದಾಗಿದ್ದಾನೆ. ಘಟನೆ ಬಗ್ಗೆ ಪೋಷಕರಿಗೆ ಬಾಲಕಿ ಮಾಹಿತಿ ನೀಡಿದ್ದಾಳೆ. ಬಳಿಕ ಪೋಷಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿರುದ್ಧ ಪೊಕ್ಸೊ ಕಾಯ್ದೆಯಡಿ ಕೇಸ್ ದಾಖಲಾಗಿದೆ.