ಬಾಲಿವುಡ್ ನಟಿ ಆಲಿಯಾ ಭಟ್ ಗೆ ಕೊರೊನಾ ಪಾಸಿಟಿವ್…

158
firstsuddi

ಮುಂಬೈ : ಬಾಲಿವುಡ್ ನಟಿ ಆಲಿಯಾ ಭಟ್ ಅವರಿಗೆ ಕೊರೊನಾ ಸೋಂಕು ತಗಲಿರುವುದು ದೃಢಪಟ್ಟಿದ್ದು, ಸ್ವತಃ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. 28 ವರ್ಷದ ನಟಿ ಈ ಕುರಿತು ಇನ್ಸ್ಟಾಗ್ರಾಮ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಎಲ್ಲರಿಗೂ ನಮಸ್ಕಾರ. ನನಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಪ್ರತ್ಯೇಕವಾಗಿ ಹೋಂ ಕ್ವಾರಂಟೈನ್ ನಲ್ಲಿದ್ದೇನೆ. ನನ್ನ ವೈದ್ಯರು ಸೂಚಿಸಿರುವ ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ನಾನು ಕೃತಜ್ಞಳು. ದಯವಿಟ್ಟು ಸುರಕ್ಷಿತವಾಗಿರಿ, ಮುನ್ನೆಚ್ಚರಿಕೆ ವಹಿಸಿ ಎಂದು ಬರೆದುಕೊಂಡಿದ್ದಾರೆ.

ಆಲಿಯಾ ಅವರು ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ‘ಗಂಗುಬಾಯಿ ಕಥಿಯಾವಾಡಿ’ ಚಿತ್ರದಲ್ಲಿ ಪಾಲ್ಗೊಂಡಿದ್ದರು. ಇತ್ತಿಚೆಗಷ್ಟೇ ಆಲಿಯಾ ಗೆಳೆಯ, ನಟ ರಣಬೀರ್ ಕಪೂರ್ ಹಾಗೂ ಬನ್ಸಾಲಿ ಅವರಿಗೆ ಕೊರೊನಾ ತಗುಲಿತ್ತು. ಬಳಿಕ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಇದೀಗ ಆಲಿಯಾ ಅವರಿಗೂ ಸೋಂಕು ತಗಲಿದ್ದು, ಈ ಬಗ್ಗೆ ಆಲಿಯಾ ಅವರು ಇನ್ಸ್ಟಾಗ್ರಾಮ್ ನಲ್ಲಿ ತಿಳಿಸಿದ್ದಾರೆ.