ಮುಂಬೈ : ಬಾಲಿವುಡ್ ನಟಿ ಪೂನಂ ಪಾಂಡೆ ಪತಿ ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ದೂರು ನೀಡಿದ ಬೆನ್ನಲ್ಲೇ ಮುಂಬೈ ಪೊಲೀಸರು ಸ್ಯಾಮ್ ಬಾಂಬೆಯನ್ನು ಬಂಧಿಸಿದ್ದಾರೆ.
ಪೂನಂ ಪಾಂಡೆ ಅವರ ತಲೆ, ಕಣ್ಣು ಮತ್ತು ಮುಖದ ಮೇಲೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಯಾಮ್ ಬಾಂಬೆ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾದಕ ನಟಿ ತಮ್ಮ ಪತಿ ಮೇಲೆ ದೂರು ನೀಡುತ್ತಿರುವುದು ಇದೇ ಮೊದಲೇನಲ್ಲ. 2020ರ ಸೆಪ್ಟೆಂಬರ್ 11ರಂದು ಪೂನಂ ಪಾಂಡೆ ತನ್ನ ಗೆಳೆಯ ಸ್ಯಾಮ್ ಬಾಂಬೆ ಅವರನ್ನು ವಿವಾಹವಾಗಿದ್ದರು. ಮದುವೆಯಾಗಿ ಎರಡು ವಾರದಲ್ಲೇ ನನಗೆ ಕಿರುಕುಳ ನೀಡುತ್ತಿದ್ದಾನೆ, ಹಲ್ಲೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ನಟಿ ಪತಿ ವಿರುದ್ಧ ಗೋವಾದಲ್ಲಿ ದೂರು ನೀಡಿದ್ದು, ಸ್ಯಾಮ್ ನನ್ನು ಗೋವಾ ಪೊಲೀಸರು ಬಂಧಿಸಿದ್ದರು. ಇದಾದ ಬಳಿಕ ಸ್ಯಾಮ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.










