ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ- ಆಸ್ಪತ್ರೆಗೆ ದಾಖಲು…

59
firstsuddi

ಬಾಲಿವುಡ್ ನ ಖ್ಯಾತ ಯುವನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತವಾಗಿದೆ. ಶೂಟಿಂಗ್ ಸಮಯದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಲಘು ಹೃದಯಾಘಾತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ನಿನ್ನೆ ರಾತ್ರಿ 10 ಗಂಟಗೆ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಗ್ಯ ಸ್ಥಿರವಾಗಿದ್ದು, ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಲಘು ಹೃದಯಾಘಾತವಾದಾಗ ಶ್ರೇಯಸ್ ವೆಲ್ ಕಮ್ ಟು ಜಂಗಲ್ ಸಿನಿಮಾದ ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ನಿನ್ನೆಯ ಚಿತ್ರೀಕರಣ ಮುಗಿದ ನಂತರ ನಟನಿಗೆ ಹೃದಯಾಘಾತವಾಗಿದೆ ಎಂಬುದು ತಿಳಿದು ಬಂದಿದೆ.