ಬಾಲಿವುಡ್ ಹಾಸ್ಯ ನಟ ರಾಜು ಶ್ರೀವಾಸ್ತವ ಇನ್ನಿಲ್ಲ…

62
firstuddi

ಬಾಲಿವುಡ್ ನ ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ(58) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಆಗಸ್ಟ್ 10ರಂದು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದರು. ತಕ್ಷಣವೇ ದೆಹಲಿ ಏಮ್ಸ್‌ಗೆ​ ಕರೆತರಲಾಗಿತ್ತು. ಕಳೆದ ಒಂದು ತಿಂಗಳಿಂದಲೂ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊನೆಗೂ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ.

ರಾಜು ಶ್ರೀವಾಸ್ತವ ಅವರು ಬಾಜಿಗರ್, ಮೈನೆ ಪ್ಯಾರ್ ಕಿಯಾ, ಬಾಂಬೆ ಟು ಗೋವಾ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಹಾಸ್ಯ ನಟರಾಗಿ ಕಾಣಿಸಿಕೊಂಡಿದ್ದಾರೆ.