ಬೆಂಗಳೂರು : ಅಶ್ವಿನಿ ನಕ್ಷತ್ರ ಖ್ಯಾತಿಯ ನಟಿ ಮಯೂರಿಯವರು ಇಂದು ತಮ್ಮ ಬಾಲ್ಯದ ಗೆಳೆಯನೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಗೆಳೆಯ ಅರುಣ್ ಅವರೊಂದಿಗೆ ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕೇವಲ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ. ಈ ಕುರಿತು ನಟಿ ಮಯೂರಿ ಅವರು ತಮ್ಮ ಇನ್ಸ್ಟಾಗ್ರಾಮ್‍ನಲ್ಲಿ ಮದುವೆಯ ವೀಡೀಯೋ ಒಂದನ್ನು ಹಾಕಿ ಹೌದು ನಾನು ಮದುವೆಯಾದೆ ಎಂದು ಬರದು ಪೋಸ್ಟ್ ಮಾಡಿದ್ದಾರೆ. ಮೊದಲು ಕಿರುತೆರೆ ಮೂಲಕ ಕಲಾರಂಗಕ್ಕೆ ಕಾಲಿಟ್ಟ ಮಯೂರಿ ಅವರು ಹಲವು ಸಿನಿಮಾಗಳಲ್ಲೂ ನಟಿಸಿದ್ದಾರೆ.










