ಬಾಳೆಹೊನ್ನೂರು : ಕರ್ತವ್ಯನಿರತ ಪೊಲೀಸ್ ಪೇದೆ ಸಾವು…

136
firstsuddi

ಚಿಕ್ಕಮಗಳೂರು : ಕರ್ತವ್ಯ ನಿರತ ಪೊಲೀಸ್ ಪೇದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ನಡೆದಿದೆ. ಯೋಗಿಶ್ (31) ಮೃತ ದುರ್ಧೈವಿ. ಮಧ್ಯರಾತ್ರಿ 2:45ರ ಸುಮಾರಿಗೆ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಅವರ ಸಾವಿಗೆ ಇನ್ನೂ ನಿಖರ ಕಾರಣ ಏನೆಂದು ತಿಳಿದು ಬಂದಿಲ್ಲ. ಎಸ್‍ಪಿ ಹರೀಶ್ ಪಾಂಡೆ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.