ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ-ಇಬ್ಬರು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ…

211
firstsuddi

ಬೆಂಗಳೂರು : ಬಿಎಂಟಿಸಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ನಡೆದಿದೆ. ಬಿಎಂಟಿಸಿ ಬಸ್ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ಇರುವ ಇಳಿಜಾರಿನಲ್ಲಿ ವೇಗವಾಗಿ ತೆರಳುತ್ತಿತ್ತು. ಈ ವೇಳೆ ಬಸ್‍ನ ಬ್ರೇಕ್ ಫೇಲ್ ಆಗಿದ್ದು, ಪರಿಣಾಮ ಮುಂದೆ ತೆರಳುತ್ತಿದ್ದ ಬೈಕ್, ಕಾರು, ಹಾಗೂ ಆಟೋ ಸೇರಿದಂತೆ ಇತರ ವಾಹನಗಳಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಕೆಲವು ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.