ಬೆಂಗಳೂರು : ಸಿಎಂ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ 25ದಿನ ಕಳೆದ ನಂತರ ಸಚಿವ ಸಂಪುಟ ವಿಸ್ತರಣೆಯ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ಸಚಿವರಾಗಲು 17ಮಂದಿ ಶಾಸಕರ ಹೆಸರು ಅಂತಿಮವಾಗಿದೆ. ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ಸಂಜೆ ಸಚಿವ ಸಂಪುಟದ ಅಂತಿಮ ಪಟ್ಟಿಯನ್ನು ತಯಾರು ಮಾಡಿಕೊಟ್ಟಿದ್ದು, ಇಂದು ಬೆಳಿಗ್ಗೆ 10:30ಕ್ಕೆ ಎಲ್ಲಾ ಶಾಸಕರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನೂತನ ಸಚಿವರ ಪಟ್ಟಿ ; ಗೋವಿಂದ ಕಾರಜೋಳ, ಡಾ ಅಶ್ವಥ ನಾರಾಯಣ ಸಿ, ಲಕ್ಷ್ಮಣ ಸಂಗಪ್ಪ ಸವದಿ, ಕೆ ಎಸ್ ಈಶ್ವರಪ್ಪ, ಆರ್ ಅಶೋಕ್, ಜಗದೀಶ್ ಶೆಟ್ಟರ್, ಬಿ ಶ್ರೀರಾಮುಲು, ಎಸ್ ಸುರೇಶ್ ಕುಮಾರ್, ವಿ ಸೋಮಣ್ಣ, ಸಿ ಟಿ ರವಿ, ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ ಪೂಜಾರಿ, ಜೆ ಸಿ ಮಾಧುಸ್ವಾಮಿ, ಚಂದ್ರಕಾಂತ ಗೌಡ ಚನ್ನಪ್ಪಗೌಡ ಪಾಟೀಲ್, ಹೆಚ್ ನಾಗೇಶ್, ಪ್ರಭು ಚೌಹಾಣ್ ಮತ್ತು ಶಶಿಕಲಾ ಅಣ್ಣಾಸಾಹೇಬ್ ಜೊಲ್ಲೆ ಈ ಎಲ್ಲಾ ಶಾಸಕರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.










