ಲಕ್ನೋ : ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರು ಚುನಾವಣಾ ರ್ಯಾಲಿ ನಡೆಸಿದರು. ಈ ವೇಳೆ ಮುಸ್ಲಿಂ ಮಹಿಳೆಯರ ಬಗ್ಗೆ ಮಾತನಾಡಿದ ಅವರು ಬಿಜೆಪಿ ಅವರಿಗೆ ಮುಸ್ಲಿಂ ಮಹಿಳೆಯರ ಮೇಲೆ ಗೌರವವಿದೆ ಎಂದು ಹೇಳಿದ್ದಾರೆ.
ಮುಸ್ಲಿಂ ಮಹಿಳೆಯರಿಗೆ ಬಿಜೆಪಿಯವರು ಬೆಂಬಲಿಸುತ್ತಿರುವುದು ವಿಪಕ್ಷಗಳಿಗೆ ಸಹಿಸಲು ಆಗುತ್ತಿಲ್ಲ. ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್ ಶಿಕ್ಷೆಯಿಂದ ಮುಕ್ತಗೊಳಿಸಿದ್ದೇವೆ. ಬಿಜೆಪಿ ಮೇಲೆ ಮುಸ್ಲಿಂ ಮಹಿಳೆಯರಿಗೆ ವಿಶ್ವಾಸ ಹೆಚ್ಚಾಗುತ್ತಿದೆ. ಇದರಿಂದ ಪ್ರತಿಪಕ್ಷಗಳು ಆತಂಕಕ್ಕೀಡಾಗಿವೆ. ಮುಸ್ಲಿಂ ಮಹಿಳೆಯರ ಹಕ್ಕು ರಕ್ಷಣೆಗಾಗಿ ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.










