ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ ಲಕ್ಷ್ಮಣ ಸವದಿ.

52
firstsuddi

ಬೆಳಗಾವಿ : ಅಥಣಿ ವಿಧಾನಸಭೆ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನಿಡುವುದಾಗಿ ಘೋಷಿಸಿದ್ದಾರೆ.

ಬೆಳಗಾವಿಯ ಅಥಣಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸವದಿ, ಬಿಜೆಪಿಗೆ ರಾಜೀನಾಮೆ ಕೊಡಲು ನಿರ್ಧಾರ ಮಾಡಿದ್ದೇನೆ. ನಾಳೆ ಕ್ಷೇತ್ರದ ಜನರ ಜೊತೆ ಚರ್ಚಿಸಿ ನನ್ನ ಮುಂದಿನ ನಿರ್ಧಾರ ಘೋಷಣೆ ಮಾಡುತ್ತೇನೆ. ಬಿಜೆಪಿ ಟಿಕೆಟ್ ಸಿಗದ ಮೇಲೆ ಪಕ್ಷದಲ್ಲಿ ಇರಲು ಸಾಧ್ಯವೇ? ಅಥಣಿ ಕ್ಷೇತ್ರದ ಜನರ ರಕ್ಷಣೆ ಮಾಡುವುದು ನನ್ನ ಜವಾಬ್ದಾರಿ ಎಂದರು.

ಕೊನೆಗಳಿಗೆವರೆಗೂ ನಿನ್ನ ಜೊತೆ ಇದ್ದೇವೆ ಎಂದು ಬಿಜೆಪಿ ನಾಯಕರು ಹೇಳಿದರು. ನನ್ನ ಜೊತೆಗೆ ಇದ್ದಾರೆ ಎಂದು ಭಾವಿಸಿದ್ದೆ. ಬಿಜೆಪಿ ಮುಖಂಡರು ನಿಷ್ಠಾವಂತ ಕಾರ್ಯಕರ್ತ. ಪಕ್ಷವನ್ನ ತಾಯಿಯ ಸ್ಥಾನದಲ್ಲಿ ಇಟ್ಟಿದ್ದೆ, ವಿಷ ಕೊಡುವುದಿಲ್ಲ ಎಂದಿದ್ದೆ. ಆದರೆ ತಾಯಿ ಕೂಡ ಭ್ರಷ್ಟಳಾಗಿದ್ದಾಳೆ ಎನ್ನುವ ಭಾವನೆ ಬರುತ್ತಿದೆ. ಅವತ್ತಿನ ಬಿಜೆಪಿ ಇಂದಿನ ಬಿಜೆಪಿಗೆ ಬಹಳ ವ್ಯತ್ಯಾಸ ಇದೆ ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿ ಎಲ್ಲ ಹಿರಿಯರಿಗೆ, ಬಿಎಸ್ ಯಡಿಯೂರಪ್ಪ, ಬೊಮ್ಮಾಯಿ, ಅಶೋಕ್ ಸೇರಿ ಎಲ್ಲರಿಗೆ ಅಭಿನಂದನೆ. ನನ್ನಿಂದ ಏನಾದರೂ ತಪ್ಪಾದರೆ ಕ್ಷಮಿಸಿ ನನಗೆ ಹಾರೈಸಿ ಎಂದು ಹೇಳುವೆ. ನನಗೆ ಆಸೆ ಇದೆ, ನನ್ನ ಹಿರಿಯರು ಮತ್ತೆ ಎರಡನೇ ಬಾರಿ ಸಿಎಂ ಆಗಬೇಕೆಂಬ ಹಂಬಲ ಇಟ್ಟುಕೊಂಡಿದ್ದಾರೆ. ಅವರಿಗೆ ಎರಡನೇ ಬಾರಿ ಸಿಎಂ ಆಗಲ್ಲ, ಬಹುತೇಕ ಅವರಿಗೆ ಪ್ರಧಾನಿಗೆ ಅವಕಾಶ ಇದೆ ಎಂದು ಪರೋಕ್ಷವಾಗಿ ಸಿಎಂ ಬೊಮ್ಮಯಿಗೆ ಟಾಂಗ್ ಕೊಟ್ಟರು.