ಬಿಜೆಪಿಗೆ ಸೊಗಡು ಶಿವಣ್ಣ ಗುಡ್‌ಬೈ…

67
firstsuddi

 ತುಮಕೂರು : ತುಮಕೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆ ಮಾಜಿ ಸಚಿವ ಸೊಗಡು ಶಿವಣ್ಣ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಇಮೇಲ್‌ ಮುಖಾಂತರ ರಾಜಿನಾಮೆ ಪತ್ರ ರವಾನೆ ಮಾಡಿದ್ದು, ಸದ್ಯದಲ್ಲೇ ಅವರು ಜೆಡಿಎಸ್‌ಗೆ ಸೇರ್ಪಡೆ ಆಗುವ ಕುರಿತು ಚಿಂತನೆ ಮಾಡ್ತಿದ್ದಾರೆ ಎಂದು ಹೇಳಲಾಗ್ತಿದೆ.

ನಗರದಲ್ಲಿ ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನನಗೆ ಟಿಕೆಟ್ ಕೈ ತಪ್ಪಲು ಸಂಸದ ಜಿಎಸ್ ಬಸವರಾಜ್, ಶಾಸಕ ಜ್ಯೋತಿ ಗಣೇಶ್ ಹಾಗೂ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಳ್ ಮತ್ತು ಮಾಜಿ ಶಾಸಕ ಸುರೇಶ್ ಗೌಡ ಈ ನಾಲ್ಕು ಜನ ಕಾರಣ ಎಂದು ಆರೋಪಿಸಿದರು. ನಾನು ಜೀವ ಇರೋವರೆಗೂ ಕಾಂಗ್ರೆಸ್‌ ಗೆ ಹೋಗಲ್ಲ. ಮಾಜಿ ಪ್ರಧಾನಿ ದೇವೇಗೌಡರು ಸಿನಿಯರ್ ನಾವು ಜೂನಿಯರ್. ಅವರ ನಮ್ಮ ನಡುವೆ ಒಳ್ಳೆಯ ಬಾಂಧವ್ಯ ಇದೆ ಎಂದರು.

ಟಿಕೆಟ್ ಕೈ ತಪ್ಪಿದ್ದಕ್ಕೆ ಕಾರ್ಯಕರ್ತರ ಸಭೆ ಕರೆದಿದ್ದೆ. ಸಭೆಯಲ್ಲಿ ಸ್ವಯಂ ಪ್ರೇರಿತವಾಗಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ನೂರಾರು ಕಾರ್ಯಕರ್ತರು, ಸಭೆ ತೀರ್ಮಾನಕ್ಕೆ ನಾನು ಬದ್ಧ ಎಂದು ರಿಸೈನ್ ಮಾಡಿದ್ದಾರೆ. ಈ ಬಾರಿ ನನ್ನ ಸ್ಪರ್ಧೆ ಬಹುತೇಕ ಖಚಿತ. ನನಗೆ ಬಹಳ ಪಕ್ಷಗಳಿಂದ ಆಫರ್ ಬಂದಿದೆ. ಕಾರ್ಯಕರ್ತರ ಜೊತೆ ಮಾತನಾಡಿ ತೀರ್ಮಾನ ಮಾಡುವೆ ಎಂದು ತಿಳಿಸಿದರು.