ಚೆನ್ನೈ : ಬಿಜೆಪಿ ಪಕ್ಷದ ಹಿರಿಯ ನಾಯಕ ಹಾಗೂ ತಮಿಳುನಾಡು ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎನ್. ಲಕ್ಷ್ಮಣನ್(92) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲಕ್ಷ್ಮಣನ್ ಅವರು ಇಂದು ಸೇಲಂನ ಸೆವ್ವೈಪೆಟ್ಟೈನಲ್ಲಿರುವ ತಮ್ಮ ನಿವಾಸದಲ್ಲಿ ಮೃತಪಟ್ಟಿದ್ದಾರೆ. ಲಕ್ಷ್ಮಣ್ ಅವರು 2 ಬಾರಿ ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥರಾಗಿದ್ದರು ಹಾಗೂ 2001-06ರವರೆಗೆ ಐಲಾಪುರ ಕ್ಷೇತ್ರವನ್ನು ಪ್ರತಿನಿಧಿಸಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು.
ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ಹಿರಿಯ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದು, ತಮ್ಮ ಟ್ವಿಟರ್ನಲ್ಲಿ ತಮಿಳುನಾಡಿನ ಜನತೆಗೆ ಸೇವೆ ಸಲ್ಲಿಸುವಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸಂಘಟನೆಯನ್ನು ವಿಸ್ತರಣೆ ಮಾಡುವಲ್ಲಿ ಲಕ್ಷ್ಮಣನ್ ಅವರು ಮುಂಚೂಣಿಯಲ್ಲಿದ್ದರು. ತುರ್ತು ಪರಿಸ್ಥಿತಿ ವಿರೋಧಿ ಚಳುವಳಿಯಲ್ಲಿ ಅವರ ಪಾತ್ರ ಎಂದಿಗೂ ನೆನಪಿನಲ್ಲಿಡುವಂತದ್ದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.










