ಬಿಜೆಪಿ ಅಧಿಕಾರಕ್ಕೆ ಬಂದರೆ ಮದ್ಯದಂಗಡಿ ತೆರೆಯಲು ಅವಕಾಶ – ಬಿಜೆಪಿ ಹೇಳಿಕೆಗೆ ಕಾಂಗ್ರೆಸ್ ಕಿಡಿ…

93
firstsuddi

ಇಂಫಾಲ್ : ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಣಿಪುರದಲ್ಲಿ ಭಾರತ ನಿರ್ಮಿತ ವಿದೇಶಿ ಮದ್ಯ (ಐಎಂಎಫ್ಎಲ್) ಅಂಗಡಿಗಳನ್ನು ತೆರೆಯಲಾಗುವುದು ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ದರು. ಸದ್ಯ ಈ ಹೇಳಿಕೆಗೆ ಕಾಂಗ್ರೆಸ್‌ನಿಂದ ತೀವ್ರ ಟೀಕೆ ವ್ಯಕ್ತವಾಗಿದ್ದು, ಕಾಂಗ್ರೆಸ್ ಹಿರಿಯ ನಾಯಕ ಜೈರಾಮ್ ರಮೇಶ್ ಇದು ಮಣಿಪುರದ ಮಹಿಳೆಯರಿಗೆ ಅವಮಾನ ಎಂದು ಕಿಡಿಕಾರಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಜೈರಾಮ್ ರಮೇಶ್ ಅವರು, ಪ್ರಚಾರ ಮುಕ್ತಾಯವಾಗುವ 48 ಗಂಟೆಗಳ ಮುನ್ನ ಭಾರತೀಯ ನಿರ್ಮಿತ ವಿದೇಶಿ ಮದ್ಯದ ಅಂಗಡಿಗಳನ್ನು ತೆರೆಯಲಾಗುವುದು ಎಂದು ಬಿಜೆಪಿ ಸಿಎಂ ಘೋಷಿಸಿರುವುದು ಆಘಾತಕಾರಿಯಾಗಿದೆ. ತಕ್ಷಣವೇ ಈ ಹೇಳಿಕೆಯನ್ನು ಹಿಂಪಡೆಯಬೇಕು. ಅಲ್ಲದೇ ಬಿರೇನ್ ಸಿಂಗ್ ಅವರು ರಾಜ್ಯದ ಮಹಿಳೆಯರು, ಸಾಮಾಜಿಕ ಕಾರ್ಯಕರ್ತರ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಅಧಿಕೃತವಾಗಿ ಒಣ ರಾಜ್ಯವಾಗಿರುವ ಮಣಿಪುರದಲ್ಲಿ ಐಎಂಎಫ್ಎಲ್ ಅಂಗಡಿಗಳಿಗೆ ಅನುಮತಿ ನೀಡುವುದಾಗಿ ಮುಖ್ಯಮಂತ್ರಿಗಳು ಗುರುವಾರ ಪೂರ್ವ ಇಂಫಾಲ್ ಜಿಲ್ಲೆಯಲ್ಲಿ ನಡೆದ ಸಭೆಯಲ್ಲಿ ಹೇಳಿದ್ದರು.