ಬಿಜೆಪಿ ಅಭ್ಯರ್ಥಿಗಳ 5ನೇ ಪಟ್ಟಿ ಬಿಡುಗಡೆ- ಬೆಳಗಾವಿಯಿಂದ ಜಗದೀಶ್ ಶೆಟ್ಟರ್ ಕಣಕ್ಕೆ…

43
firstsuddi

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ನಿನ್ನೆ ಬಿಡುಗಡೆ ಮಾಡಿದೆ. ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ತೀವ್ರ ವಿರೋಧದ ನಡುವೆ ಜಗದೀಶ್ ಶೆಟ್ಟರ್​ಗೆ ಬೆಳಗಾವಿ ಟಿಕೆಟ್ ಘೋಷಣೆ ಮಾಡಲಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲದಲ್ಲಿ ಬಿಜೆಪಿ ಹೈಕಮಾಂಡ್ ಇದ್ದಂತೆ ಕಾಣುತ್ತಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್​ಗಾಗಿ ಫೈಟ್ ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ, ರಾಜ್ಯ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಿ ಟಿಕೆಟ್ ಘೋಷಿಸಲು ಹೈಕಮಾಂಡ್ ನಿರ್ಧರಿಸಿದೆ.

ಯಾರಿಗೆಲ್ಲ ಟಿಕೆಟ್:-
ರಾಯಚೂರು ಲೋಕಸಭಾ ಕ್ಷೇತ್ರ-ರಾಜಾ ಅಮರೇಶ್ವರ ನಾಯಕ
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ-ಡಾ.ಕೆ.ಸುಧಾಕರ್
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ-ವಿಶ್ವೇಶ್ವರ ಹೆಗಡೆ ಕಾಗೇರಿ (ಹಾಲಿ ಸಂಸದ ಅನಂತಕುಮಾರ ಹೆಗಡೆಗೆ ಕೈತಪ್ಪಿದ ಟಿಕೆಟ್)
ಬೆಳಗಾವಿ ಲೋಕಸಭಾ ಕ್ಷೇತ್ರ-ಜಗದೀಶ್ ಶೆಟ್ಟರ್
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಇನ್ನೂ ನಿರ್ಧಾರವಾಗಿಲ್ಲ.