ಬಿಜೆಪಿ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ : ಬಸವರಾಜ ಬೊಮ್ಮಾಯಿ.

70
firstsuddi

ನವದೆಹಲಿ : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸುವ ಮುನ್ನ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಜೊತೆ ಮಾತುಕತೆ ನಡೆಸಿದ್ದು, ರಾಜ್ಯ ಕಾರ್ಯಕಾರಿಣಿ ನಂತರ ಈ ಬಗ್ಗೆ ನಿರ್ಧಾರ ಮಾಡೋಣ ಎಂದು ತಿಳಿಸಿದ್ದಾರೆ. ಅಮಿತ್ ಶಾ ಅವರನ್ನು ಭೇಟಿಯಾಗಲಿಲ್ಲ, ನಿನ್ನೆ ಸಂಸತ್ತಿನಲ್ಲಿ ಮಸೂದೆಗಳು ವಿಳಂಬವಾಗಿದ್ದರಿಂದ ಸಮಯಾವಕಾಶ ಲಭ್ಯವಾಗಲಿಲ್ಲ, ಮತ್ತೆ ಅವಕಾಶ ಸಿಕ್ಕಾಗ ಭೇಟಿ ಮಾಡುತ್ತೇನೆ ಎಂದರು.

ಈ ಬಾರಿಯ ದೆಹಲಿ ಭೇಟಿ ಬಹಳ ಫಲಪ್ರದವಾಗಿದೆ. ಪರಿಸರ ಖಾತೆ, ಹಣಕಾಸು ಇಲಾಖೆ, ರಕ್ಷಣಾ ಇಲಾಖೆಯ ಸಚಿವರನ್ನು ಭೇಟಿ ಮಾಡಿದ್ದು, ಎಲ್ಲರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಬಿಜೆಪಿ ಸ್ಥಾಪನಾ ದಿನದಂದು ಪಕ್ಷದ ಕೇಂದ್ರ ಕಚೇರಿಯಲ್ಲಿ ಭಾಗವಹಿಸಿದ್ದು ನನಗೆ ಬಹಳ ಸಂತೋಷದ ವಿಚಾರವಾಗಿದೆ. ಈ ಬಾರಿ ಬಜೆಟ್ ನಲ್ಲಿ ಮಂಡಿಸಿರುವ ಭರವಸೆಗಳನ್ನು ಈಡೇರಿಸಲು ಮುಂದಿನ ದಿನಗಳಲ್ಲಿ ಬಿಜೆಪಿ ಎಲ್ಲಾ ರೀತಿಯಲ್ಲಿಯೂ ಶ್ರಮಿಸಲಿದೆ ಎಂದರು.