ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ…

56
firstsuddi

ಧಾರವಾಡ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ.

ಪ್ರವೀಣ ಕಮ್ಮಾರ ಮೃತ ವ್ಯಕ್ತಿ. ನಿನ್ನೆ ರಾತ್ರಿ ನಡೆದ ಜಗಳದಲ್ಲಿ ಪ್ರವೀಣ ಕಮ್ಮಾರನ ಹೊಟ್ಟೆಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಇನ್ನು ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದ ಪ್ರವೀಣನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಇಂದು ಚಿಕಿತ್ಸೆ ಫಲಿಸದೇ ಪ್ರವೀಣ್ ಸಾವನ್ನಪ್ಪಿದ್ದಾರೆ.

ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಗರಗ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.