ಬಿಜೆಪಿ ಟಿಕೆಟ್ ಸಿಗದಿದ್ದರೆ ಹೊಸ ಚಿಹ್ನೆ ಕ್ಷೇತ್ರಕ್ಕೆ ಬರುತ್ತದೆ : ಶರತ್ ಬಚ್ಚೇಗೌಡ.

299
firstsuddi

ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದಿದ್ದರೆ ಹೊಸ ಚಿಹ್ನೆ ಕ್ಷೇತ್ರಕ್ಕೆ ಬರುತ್ತದೆ ಎಂದು ಶರತ್ ಬಚ್ಚೇಗೌಡ ಅವರು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಹೊಸಕೋಟೆ ತಾಲ್ಲೂಕಿನ ಅನುಗೊಂಡನಹಳ್ಳಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಉಪ ಚುನಾವಣೆಯಲ್ಲಿ ನೂರಕ್ಕೆ ನೂರು ನಾನೇ ಅಭ್ಯರ್ಥಿ. ಇಂದಿಗೂ ನಾನೇ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಹೊಸ ಚಿಹ್ನೆ ಕ್ಷೇತ್ರಕ್ಕೆ ಬರುತ್ತದೆ. ಪಕ್ಷ ಬಿಟ್ಟು ಪ್ರಚಾರ ಮಾಡುವಾಗ ನನ್ನ ತಂದೆ ಬಚ್ಚೇಗೌಡ ಅವರು ನನ್ನ ಪರ ಪ್ರಚಾರ ಮಾಡಲು ಸಾಧ್ಯವಾಗುವುದಿಲ್ಲ. ನೀವೆ ನನ್ನ ಕುಟುಂಬವಾಗಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಹಾಗೂ ಕ್ಷೇತ್ರದ ಜನರಿಗೆ ಕರೆ ನೀಡಿದ್ದಾರೆ. ಕ್ಷೇತ್ರದಲ್ಲಿ 3ಸಾವಿರ ಮತ ಇದ್ದ ಬಿಜೆಪಿ ಪಕ್ಷವನ್ನು ನಮ್ಮ ಕಾರ್ಯಕರ್ತರು ಬೆವರು-ರಕ್ತ ಸುರಿಸಿ ಕಟ್ಟಿ ಬೆಳೆಸಿದರು. ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿಕೊಂಡು ಕೋರ್ಟ್ ಕಚೇರಿ ಎಂದು ಓಡಾಡಿದವರಿಗೆ ಇಂದು ವಂಚನೆಯಾಗಿದೆ. ಪಕ್ಷವನ್ನು ಕಟ್ಟಿ ಬೆಳೆಸಿದವರಿಗೆ ಇಂದು ಸ್ಥಾನ ದೊರೆತಿಲ್ಲ ಎಂದು ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.