ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಪದಗ್ರಹಣ…

248
firstsuddi

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳವಾರ ಬೆಂಗಳೂರಿನ ಬಿಜೆಪಿಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.ಅವರಿಗೆ ನಿರ್ಗಮನ ಅಧ್ಯಕ್ಷ ಹಾಗೂ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಧ್ವಜ ನೀಡುವ ಮೂಲಕ ಅಧಿಕಾರ ಹಸ್ತಾಂತರ ಮಾಡಿದರು.

firstsuddi

ಈ ಸಂದರ್ಭದಲ್ಲಿ ನಳಿನ್ ಕುಮಾರ್ ಕಟೀಲ್ ರನ್ನು ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದರು.ಸಚಿವರು, ಸಂಸದರು, ಶಾಸಕರು, ಬಿಜೆಪಿಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.