ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ, ಮರುನೇಮಕದ ಬಗ್ಗೆ ಯಾವುದೇ ಅನುಮಾನವಿಲ್ಲ: ಬಿ.ವೈ ವಿಜಯೇಂದ್ರ.

45

ಬೆಂಗಳೂರು: ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಹಾಗು ಮರುನೇಮಕದ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಇನ್ನೂ ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧ್ಯಕ್ಷರ ಆಯ್ಕೆ ಆಗಬೇಕಿದೆ. ಉಳಿದ ಜಿಲ್ಲಾಧ್ಯಕ್ಷರ ಆಯ್ಕೆ ಎರಡು-ಮೂರು ದಿನಗಳಲ್ಲಿ ಆಗಲಿದೆ. ಶೀಘ್ರದಲ್ಲೇ ಹೈಕಮಾಂಡ್‍ಗೆ ಜಿಲ್ಲಾಧ್ಯಕ್ಷರ ಪಟ್ಟಿ ರವಾನೆಯಾಗಲಿದೆ ಎಂದು ತಿಳಿಸಿದರು. ನಮ್ಮ ಪಕ್ಷದ ಆಂತರಿಕ ಸಮಸ್ಯೆಗಳು ಕೇಂದ್ರದ ವರಿಷ್ಠರ ಗಮನಕ್ಕೆ ಬಂದಿದೆ. ಯಾರಿಗೆ ನೋಟಿಸ್ ಕೊಡಬೇಕಿತ್ತೋ ಕೊಟ್ಟಾಗಿದೆ. ಅವರು ಅದಕ್ಕೆ ಉತ್ತರ ಕೊಟ್ಟಿದ್ದಾರೆ. ರಾಜ್ಯದ ಹಾಗೂ ಜನರ ಹಿತದೃಷ್ಟಿ ಮತ್ತು ಪಕ್ಷದ ಹಿತದೃಷ್ಟಿಯಿಂದ ಕೇಂದ್ರ ನಾಯಕರು ಈ ಸಮಸ್ಯೆಗಳನ್ನು ಬಗೆಹರಿಸುತ್ತಾರೆ ಎಂದು ಹೇಳಿದರು.