ಬಿಜೆಪಿ ರಾಜ್ಯ ಉಸ್ತುವಾರಿ ಘೋಷಣೆ-ಸಿ.ಟಿ ರವಿ ಅವರಿಗೆ 3 ರಾಜ್ಯಗಳ ಉಸ್ತುವಾರಿ…

323
firstsuddi

ನವದೆಹಲಿ : ಇತ್ತೀಚೆಗೆ ವಿವಿಧ ರಾಜ್ಯಗಳಲ್ಲಿ ಉಪ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆ ಕೇಂದ್ರ ಸರ್ಕಾರ ಬಿಜೆಪಿ ರಾಜ್ಯಗಳ ಉಸ್ತುವಾರಿಯ ಹೊಸ ತಂಡವನ್ನು ಘೋಷಣೆ ಮಾಡಿದ್ದು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರಿಗೆ 3 ರಾಜ್ಯಗಳ ಉಸ್ತುವಾರಿಯನ್ನು ವಹಿಸಲಾಗಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಬಳಿಕ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿಜೆಪಿ ಮುಖಂಡ ಸಿ.ಟಿ. ರವಿ ಅವರಿಗೆ ತಮಿಳುನಾಡು, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಉಸ್ತುವಾರಿಯನ್ನು ವಹಿಸಲಾಗಿದೆ.

ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಅರುಣ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಉಪ ಉಸ್ತುವಾರಿಯಾಗಿ ಡಿ.ಕೆ. ಅರುಣಾ ಅವರನ್ನು ನೇಮಿಸಲಾಗಿದೆ. ರಾಜ್ಯದ ಮತ್ತೊಬ್ಬ ಮುಖಂಡರಾದ ನಿರ್ಮಲಕುಮಾರ್ ಅವರನ್ನು ನೆರೆಯ ಪುದುಚೆರಿಗೆ ನಿಯೋಜಿಸಲಾಗಿದೆ.