ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ 14 ದಿನ ನ್ಯಾಯಾಂಗ ಬಂಧನ…

69
firstsuddi

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್  ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ನಿನ್ನೆ ಸಂಜೆ ಬೆಂಗಳೂರಿನ ಕ್ರಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ವ್ಯಕ್ತಿಯಿಂದ 40 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು. ಅವರ ನಿವಾಸ ಮತ್ತು ಕಚೇರಿಯಿಂದ ಬರೋಬ್ಬರಿ 6 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಪೊಲೀಸರು ಇಂದು ಬೆಳಗ್ಗೆ ಪ್ರಶಾಂತ್ ನನ್ನು ಲೋಕಾಯುಕ್ತ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದರು. ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಪ್ರಶಾಂತ್ ಮಾಡಾಳ್ ಜೊತೆಗೆ ಅವರ ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ, ಹಣ ನೀಡಲು ಬಂದಿದ್ದ ನಿಕೋಲಸ್, ಗಂಗಾಧರ್ ಎಂಬುವವರನ್ನು ಸಹ ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.