ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಎಫ್‍ಐಆರ್…

53
firstsuddi

ಬೆಂಗಳೂರು : ಲೋಕಾಯುಕ್ತ ದಾಳಿ ಪ್ರಕರಣದಲ್ಲಿ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಮತ್ತಿತರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಶ್ರೇಯಸ್ ಕಶ್ಯಪ್ ಕೆಮಿಕಲ್ ಹೆಸರಿನ ಕಂಪನಿಯ ಪಾಲುದಾರ ನೀಡಿದ ದೂರಿನ ಅನ್ವಯ ದಾಖಲಾದ ಎಫ್ಐಆರ್ ನಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಎ1 ಆಗಿದ್ದು, ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಎ2 ಆರೋಪಿ, ಕೆಎಸ್​ಡಿಎಲ್ ಅಕೌಂಟೆಂಟ್ ಸುರೇಂದ್ರ ಎ3, ಮಾಡಾಳ್ ಪ್ರಶಾಂತ್ ಸಂಬಂಧಿ ಸಿದ್ದೇಶ್ ಎ4, ಅರೋಮಾ ಕಂಪನಿ ಸಿಬ್ಬಂದಿ ಆಲ್ಬರ್ಟ್ ನಿಕೋಲಾ ಎ5, ಅರೋಮಾ ಕಂಪನಿ ಸಿಬ್ಬಂದಿ ಗಂಗಾಧರ ಎ6 ಆರೋಪಿ ಆಗಿದ್ದಾನೆ.

ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನ ಭೀತಿ ಎದುರಾಗಿದ್ದು, ಜಾಮೀನು ಪಡೆಯಲು ಕಸರತ್ತು ನಡೆಸುತ್ತಿದ್ದಾರೆ. ಇನ್ನೊಂದೆಡೆ ನಾಪತ್ತೆಯಾಗಿರುವ ಶಾಸಕರಿಗಾಗಿ ಲೋಕಾಯುಕ್ತ ಪೊಲೀಸರು ಮೂರು ತಂಡಗಳಿಂದ ಹುಟುಕಾಟ ನಡೆಸಲಾಗುತ್ತಿದೆ.

ಶಾಸಕರ ಪುತ್ರನ ಕಚೇರಿ ಮತ್ತು ಮನೆ ಮೇಲಿನ ದಾಳಿಯಲ್ಲಿ ಒಟ್ಟು 8 ಕೋಟಿ 12 ಲಕ್ಷದ 30 ಸಾವಿರ ನಗದು ವಶ ಪಡಿಸಿಕೊಳ್ಳಲಾಗಿದೆ. ಇನ್ನು ದಾಖಲಾತಿಗಳ ಪರಿಶೀಲನೆ ನಡೆದಿದೆ. ಐಜಿಪಿ ಸುಬ್ರಮಣ್ಯೇಶ್ವರ ರಾವ್, ಲೋಕಾಯುಕ್ತ ಎಸ್.ಪಿ.ಅಶೋಕ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.