ಬಿಜೆಪಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿಯಲ್ಲಿ ಬಿಎಸ್‍ವೈಗೆ ಸ್ಥಾನ…

52
firstsuddi

ನವದೆಹಲಿ : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯ ಸಂಸದೀಯ ಮಂಡಳಿ ಪುನಾರಚನೆಯಾಗಿದ್ದು, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮಹತ್ವದ ಸ್ಥಾನ ಸಿಕ್ಕಿದೆ. ಈ ಮೂಲಕ ಬಿ.ಎಸ್.ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ ಎಂಬ ಸಂದೇಶವನ್ನು ಬಿಜೆಪಿ ಹೈಕಮಾಂಡ್ ರವಾನಿಸಿದೆ.

ಕೇಂದ್ರ ಚುನಾವಣೆ ಸಮಿತಿಯಲ್ಲೂ ಯಡಿಯೂರಪ್ಪ ಅವರಿಗೆ ಸ್ಥಾನ ಸಿಕ್ಕಿದೆ. ಹಿರಿಯ ನಾಯಕರಾದ ನಿತಿನ್ ಗಡ್ಕರಿ, ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಬಿಜೆಪಿಯ ಪ್ರಮುಖ ಸಂಸದೀಯ ಮಂಡಳಿಯಿಂದ ಕೈಬಿಡಲಾಗಿದೆ. ಚುನಾವಣಾ ಸಮಿತಿಗೆ ಈ ಸಲ ಹೈಕಮಾಂಡ್ ದೇವೇಂದ್ರ ಫಡ್ನವೀಸ್ ಗೆ ಮಣೆ ಹಾಕಿದೆ. ಬಿಜೆಪಿಯ ನೀತಿ ನಿಯಮಗಳನ್ನು ರೂಪಿಸುವ ಅಧಿಕಾರವನ್ನು ಸಂಸದೀಯ ಮಂಡಳಿ ಹೊಂದಿರಲಿದೆ.

ಬಿಜೆಪಿ ಸಂಸದೀಯ ಮಂಡಳಿ ಸದಸ್ಯರು : ಜೆ.ಪಿ.ನಡ್ಡಾ (ಅಧ್ಯಕ್ಷರು), ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿ ಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ.ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ ಜಟಿಯಾ, ಬಿ.ಎಲ್.ಸಂತೋಷ್

ಕೇಂದ್ರ ಚುನಾವಣಾ ಸಮಿತಿಯ ಸದಸ್ಯರು : ಜೆ.ಪಿ.ನಡ್ಡಾ (ಅಧ್ಯಕ್ಷರು), ನರೇಂದ್ರ ಮೋದಿ, ರಾಜನಾಥ್ ಸಿಂಗ್, ಅಮಿತ್ ಶಾ, ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸುಧಾ ಯಾದವ್, ಸತ್ಯನಾರಾಯಣ ಜಟಿಯಾ, ಭೂಪೇಂದ್ರ ಯಾದವ್, ದೇವೇಂದ್ರ ಫಡ್ನವೀಸ್, ಬಿ.ಎಲ್.ಸಂತೋಷ್, ವಿ ಶ್ರೀನಿವಾಸ್