ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆಯಾಗುತ್ತೆ- ಸಿದ್ದರಾಮಯ್ಯ.

53
firstsuddi

ಹಾಸನ: ಬಿಜೆಪಿ ಸರ್ಕಾರದ 40% ಕಮಿಷನ್ ಆರೋಪ ಸೇರಿ ಎಲ್ಲ ಹಗರಣಗಳ ಬಗ್ಗೆ ತನಿಖೆಯಾಗುತ್ತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇಂದು ಕೆಂಪೇಗೌಡ ಜಯಂತಿ ಹಿನ್ನಲೆ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಜೆಪಿ ಸರ್ಕಾರದ ಹಗರಣಗಳ ಬಗ್ಗೆ ತನಿಖೆ ನಡೆಸುವ ವಿಚಾರ ಕುರಿತು ಮಾತನಾಡಿದ ಅವರು ‘ಕೊರೊನಾ ವೇಳೆ ಮೆಡಿಕಲ್ ವಸ್ತುಗಳ ಖರೀದಿಯಲ್ಲಿ ಅವ್ಯವಹಾರ, ಬಿಟ್ ಕಾಯಿನ್, 40% ಕಮಿಷನ್ ಆರೋಪ ಸೇರಿ ಚಾಮರಾಜನಗರದ ಆಕ್ಸಿಜನ್ ದುರಂತದ ಬಗ್ಗೆಯೂ ಮರು ತನಿಖೆ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ, ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮಿ ಯೋಜನೆಯನ್ನು ಆಗಸ್ಟ್ 15ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಉಚಿತವಾಗಿ ತಲಾ 5 ಕೆಜಿ ಅಕ್ಕಿ ನೀಡಲಾಗುತ್ತಿದೆ. 10 ಕೆಜಿ ಕೊಡಲು 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಬೇಕು. ಅಷ್ಟು ಪ್ರಮಾಣದ ಅಕ್ಕಿ ನಮಗೆ ಸಿಗುತ್ತಿಲ್ಲ. ಎಫ್​ಸಿಐನವರು ಮೊದಲು ಅಕ್ಕಿ ಪೂರೈಸುವುದಾಗಿ ಹೇಳಿದ್ದರು. ಆ ನಂತರ ರಾಜ್ಯಕ್ಕೆ ಅಕ್ಕಿ ಕೊಡಲ್ಲ ಎಂದು ಹೇಳಿದೆ. ಕೇಂದ್ರದ ಬಳಿ ಅಕ್ಕಿ ಇದ್ದರೂ ರಾಜ್ಯಕ್ಕೆ ಕೊಡಲ್ಲ ಅಂತಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.