ಬೆಂಗಳೂರು : ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಬಿಜೆಪಿಗೆ ಸೇರ್ಪಡೆಗೊಂಡರು.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಸೇರಿ ಮಂಡ್ಯದ ಪ್ರಮುಖ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮದಲ್ಲಿ ಸಚಿವರಾದ ಅಶ್ವತ್ಥ್ ನಾರಾಯಣ, ಗೋಪಾಲಯ್ಯ, ನಾರಯಣಗೌಡ, ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್, ಶಾಸಕರಾದ ಸತೀಶ್ ರೆಡ್ಡಿ, ರವಿಸುಬ್ರಹ್ಮಣ್ಯ ಭಾಗಿಯಾದರು.
ಪಕ್ಷ ಸೇರ್ಪಡೆಯಾದ ಬಳಿಕ ಮಾತನಾಡಿದ ಸಚ್ಚಿದಾನಂದ, ಪ್ರಧಾನಿ ನರೇಂದ್ರ ಮೋದಿಯ ನಾಯಕತ್ವವನ್ನು ಒಪ್ಪಿ ನಾನು ಬಿಜೆಪಿ ಸೇರಿದ್ದೇನೆ. ಮುಂದೆ ವಿಧಾನಸಭೆಗೆ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳುಹಿಸಿ ಕೊಡ್ತೀವಿ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀ @BlrNirmal ಹಾಗೂ ಸಚಿವರು & ಪ್ರಮುಖರ ಉಪಸ್ಥಿತಿಯಲ್ಲಿ ಕೆಪಿಸಿಸಿ ಮಾಜಿ ಸದಸ್ಯ ಎಸ್. ಸಚ್ಚಿದಾನಂದ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಸ್.ಎಲ್. ಲಿಂಗರಾಜು & ಮಾಜಿ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು & ಬೆಂಬಲಿಗರು ಪಕ್ಷಕ್ಕೆ ಸೇರ್ಪಡೆಗೊಂಡರು. pic.twitter.com/j9gxRMgWZy
— BJP Karnataka (@BJP4Karnataka) November 28, 2022










